ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರ ಆದೇಶ ಬರುವ ಆಶಾ ಭಾವನೆ ಇತ್ತು. ಆದರೆ, ಸುಪ್ರೀಂಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಹಾಗಾಗಿ, ಸೆ. 21ರವರೆಗೆ ತಮಿಳುನಾಡಿಗೆ ನೀರು ಬಿಡದಿರಲು ಕ್ರಮ ವಹಿಸಲಾಗುವುದು ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಅವಲಂಬಿತ ರೈತರ ಹಿತರಕ್ಷಣೆ ಕಾಯುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.