ಮಡಿಕೇರಿ: ಕೊಡಗು ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಸೆ.9ರಿಂದ 13ರವರೆಗೆ ಮಳೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಸೆ.13ರ ಬೆಳಗಿನವರೆಗೆ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲಟ್೯ ಘೋಷಿಸಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ 24*7 ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.