Wednesday, June 29, 2022

Latest Posts

ಸೆ.15ರಂದು ಮಂಜೇಶ್ವರ ಶಾಸಕರ ಬಂಧನ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಧರಣಿ

ಕುಂಬಳೆ: ಮುಸ್ಲಿಂಲೀಗ್ ನೇತಾರ, ಮಂಜೇಶ್ವರ ಶಾಸಕ ಎಂ.ಸಿ.ಖಮರುದ್ದೀನ್‌ರನ್ನು ಕೂಡಲೇ ಬಂಧಿಸಿ ಸಮಗ್ರ ತನಿಖೆ ನಡೆಸಬೇಕು ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿಯ ನೇತೃತ್ವದಲ್ಲಿ ಸೆ.15 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಉಪ್ಪಳದಲ್ಲಿರುವ ಮಂಜೇಶ್ವರ ತಾಲೂಕು ಕಚೇರಿಗೆ ಬೃಹತ್ ಪ್ರತಿಭಟನಾ ಮಾರ್ಚ್ ನಡೆಯಲಿದೆ.
ಬಿಜೆಪಿ ಕೇರಳ ರಾಜ್ಯ ಉಪಾಧ್ಯಕ್ಷ ಎ.ಪಿ.ಅಬ್ದುಲ್ಲ ಕುಟ್ಟಿ ಪ್ರತಿಭಟನೆಯನ್ನು ಉದ್ಘಾಟಿಸಿ ಪ್ರಧಾನ ಭಾಷಣ ಮಾಡುವರು. ಮಂಜೇಶ್ವರ ಮಂಡಲ ಅಧ್ಯಕ್ಷ ಮಣಿಕಂಠ ರೈ ಪಟ್ಲ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾಧ್ಯಕ್ಷ , ನ್ಯಾಯವಾದಿ ಕೆ.ಶ್ರೀಕಾಂತ್ ಸೇರಿದಂತೆ ಅನೇಕ ಮಂದಿ ಮುಖಂಡರು ಭಾಗವಹಿಸಲಿದ್ದಾರೆ. ಬಿಜೆಪಿ ಹಾಗೂ ವಿವಿಧ ಮೋರ್ಚಾಗಳ ಕಾರ್ಯಕರ್ತರು ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಳ್ಳಬೇಕೆಂದು ಪಕ್ಷದ ಮಂಡಲ ಸಮಿತಿಯ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss