Friday, August 12, 2022

Latest Posts

ಸೆ.21 ರಿಂದ ಶಾಲಾ-ಕಾಲೇಜು ಓಪನ್ ಇಲ್ಲ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ ಸ್ಪಷ್ಟನೆ

ಬೆಂಗಳೂರು: ಕೊರೋನಾ ಆತಂಕದ ನಡುವೆಯೂ ಸೆ. 21 ರಿಂದ ಶಾಲಾ-ಕಾಲೇಜುಗಳ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಸದ್ಯಕ್ಕೆ ಶಾಲಾ ಕಾಲೇಜು ಆರಂಭ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ ಸ್ಪಷ್ಟನೆ ನೀಡಿದೆ.
ಕೊರೋನಾ ಕಡಿಮೆಯಾಗುವವರೆಗೆ (9 ರಿಂದ 12 ನೇ ತರಗತಿವರೆಗೆ) ಶಾಲಾ ಕಾಲೇಜು ಆರಂಭಿಸೋಲ್ಲ, ರಾಜ್ಯದಲ್ಲಿ ಕೇಂದ್ರದ ಮಾರ್ಗಸೂಚಿ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ ಸ್ಪಷ್ಟನೆ ನೀಡಿದೆ.
ಇಂದರಿಂದ ಸೆಪ್ಟಂಬರ್ ಅಂತ್ಯದವರೆಗೆ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲೆ, ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದರಿಲು ತೀರ್ಮಾನಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಆರ್.ಉಮಾಂಶಕರ್ ತಿಳಿಸಿದ್ದಾರೆ.
ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭಕ್ಕೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಈ ಮೂಲಕ ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9ರಿಂದ 12ನೇ ತರಗತಿ ಶಾಲೆಗಳು ಆರಂಭವಾಗಲಿವೆ ಎನ್ನಲಾಗಿತ್ತು. ಆದರೆ ಶಾಲೆ ಪುನಾರಂಭದ ಬಗ್ಗೆ ಪೋಷಕರ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss