spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸೆ.21 ರಿಂದ ಶಾಲೆಗಳಷ್ಟೇ ಆರಂಭ, ತರಗತಿಗಳಲ್ಲ : ಸಚಿವ ಎಸ್.ಸುರೇಶ್ ಕುಮಾರ್

- Advertisement -Nitte

ಮೈಸೂರು: ಶಾಲೆಗಳು ಸೆ.21 ರಿಂದ ಆರಂಭವಾಗಲಿದ್ದು, ಶಿಕ್ಷಕರು ಶಾಲೆಗೆ ಬರಬೇಕು. ಆದರೆ, ತರಗತಿಗಳು ಆರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ21 ರಂದು ಶಾಲೆಗಳಲ್ಲಿ ತರಗತಿಗಳನ್ನು ಪ್ರಾರಂಭಿಸುವುದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಅದಕ್ಕಾಗಿ ಎದುರು ನೋಡುತ್ತಿದ್ದೇವೆ
ಎಂದರು. 1ರಿಂದ 10  ನೇ ತರಗತಿವರೆಗಿನ ದಾಖಲಾತಿಯನ್ನು ಸೆ.೩೦ರೊಳಗೆ ಮುಗಿಸಬೇಕು. ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಪೋಷಕರಿಂದ ಪಡೆಯಬೇಕು. ಆಗೊಮ್ಮೆ ಸಮಸ್ಯೆಯಾದರೆ ಆಯಾ ಜಿಲ್ಲೆಯ ಡಿಡಿಪಿಐ, ಬಿಇಓ ಈ ಬಗ್ಗೆ ಕ್ರಮಕೈಗೊಳ್ಳುತ್ತಾರೆ
ಈಗಾಗಲೇ, ಖಾಸಗಿ ಶಾಲೆಗಳಿಗೆ ಸರಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆಯಾದರೆ ಕೂಡಲೇ ಬಿಇಓ ಅವರನ್ನು ಸಂಪರ್ಕಿಸಿ ಎಂದು ತಿಳಿಸಿದರು.
ನಾನು ಹೋದ ಕಡೆಯಲ್ಲೆಲ್ಲ ಶಾಲೆ ಯಾವಾಗ ಶುರುವಾಗುತ್ತದೆ ಎಂದು ಮಕ್ಕಳು ಕೇಳುತ್ತಿದ್ದಾರೆ.
ಆದರೆ, ಪೋಷಕರು ಮಾತ್ರ ಆತಂಕದಲ್ಲಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳು ಜವಾಬ್ದಾರಿ ನಮ್ಮ ಇಲಾಖೆಯದ್ದಾಗಿದೆ ಎಂದರು.
ರಾಜ್ಯದಲ್ಲಿ ಸಕಾರಾತ್ಮಕ ಬೆಳವಣಿಗೆಯಾಗುತ್ತಿದ್ದು, ಪೋಷಕರು ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ದರೆ, ಬಿಇಓ ಯಿಂದ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದರು.
ಸ್ಥಳೀಯ ಕೇಬಲ್ ಚಾನಲ್‌ಗಳಲ್ಲಿ ಆನ್‌ಲೈನ್ ತರಗತಿ ಪ್ರಾರಂಭ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸುರೇಶ್ ಕುಮಾರ್, ಕೇಬಲ್ ಸಂಸ್ಥೆಗಳ ಮಾಲೀಕರು ಹೆಚ್ಚಿನ ಹಣ ಕೇಳುತ್ತಿದ್ದಾರೆ. ಚಂದನ ವಾಹಿನಿಯಲ್ಲಿ ಈಗಾಗಲೇ ಸೇತುಬಂಧ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಚಂದನಕ್ಕೆ ನೀಡುವಷ್ಟು ಹಣವನ್ನು ಸ್ಥಳೀಯ ಕೇಬಲ್ ಟಿವಿಯವರಿಗೆ ನೀಡಬಹುದು. ಅಷ್ಟು ಹಣಕ್ಕೆ ತರಗತಿ ನಡೆಸಿಕೊಡಿ ಅಂತ ಕೇಳಿದ್ದೇವೆ.
ಕೇಬಲ್ ಟಿವಿಯವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಟೆಂಡರ್ ಪ್ರಕ್ರಿಯೆ ಶುರುವಾಗಿದ್ದು, ಪೂರ್ಣಗೊಂಡ ಬಳಿಕ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಿಎಂ ಬದಲಾವಣೆ ಇಲ್ಲ :  ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿಗಳ ಬದಲಾವಣೆಯಿಲ್ಲ, ಅಂತಹ ಯಾವುದೇ ಸಾಧ್ಯತೆಗಳು ಕಂಡು ಬರುತ್ತಿಲ್ಲ, ನೂರಕ್ಕೆ ನೂರರಷ್ಟು ಬಿ.ಎಸ್.ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಮಾಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ ಈ ಬಗ್ಗೆ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
ಈ ವೇಳೆ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಮತ್ತಿತರರು ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss