ಬೆಂಗಳೂರು: ಇನ್ನೂ ಎರಡು ದಿನಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಮಳೆ ಹೆಚ್ಚಾಗುವ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲೆನಾಡು, ಕರಾವಳಿ, ಉತ್ತರ ಕನಾಟಕ ಅನೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಸೆ.೨೫ರವರೆಗೂ ಭಾರೀ ಮಳೆಯಾಗುವು ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.