ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸೆ.7ರಿಂದ ಪಿಯುಸಿ ಪೂರಕ ಪರೀಕ್ಷೆ: ವಿಶೇಷ ವೀಕ್ಷಕರ ನೇಮಕ-ನಿಷೇಧಾಜ್ಞೆ ಜಾರಿ

ಧಾರವಾಡ: ಪದವಿಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆ.7ರಿಂದ 19ರವರೆಗೆ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಮಧ್ಯಾಹ್ನ 2.15ರಿಂದ ಸಂಜೆ 5.30ರವರೆಗೆ ಜಿಲ್ಲೆಯಾದ್ಯಂತ ನಡೆಯಲಿವೆ.
ಕುಂದಗೋಳ, ನವಲಗುಂದ ಮತ್ತು ಕಲಘಟಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಧ್ವನಿವರ್ಧಕಗಳ ನಿಷೇಧ, ಸಮೀಪದ ಝೆರಾಕ್ಸ್ ಅಂಗಡಿ ಸ್ಥಗಿತ, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಆವರಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.
ಜಾಗೃತ ದಳ ರಚನೆ:
ಸೆ.7ರಿಂದ ಜಿಲ್ಲೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳಲ್ಲಿ ನಡೆಯಬಹುದಾದ ಅವ್ಯವಹಾರ ತಡೆಗಟ್ಟಲು ಹಾಗೂ ಪರೀಕ್ಷೆ ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಜಿಲ್ಲಾಮಟ್ಟದಲ್ಲಿ ಜಿಲ್ಲಾ ಮಟ್ಟದ ಜಾಗೃತ ದಳವನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ತಾಲೂಕಾ ಮಟ್ಟದಲ್ಲಿ ಜಾಗೃತ ದಳಗಳನ್ನು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ.
ಜಾಗೃತ ದಳದ ಸದಸ್ಯರು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಪೂರಕ ಪರೀಕ್ಷಾ ಕೇಂದ್ರಗಳಿಗೆ ಮೇಲಿಂದ ಮೇಲೆ ಅನಿರೀಕ್ಷಿತ ಭೇಟಿನೀಡಿ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ ಸೂಕ್ತ ಕ್ರಮ ಜರುಗಿಸಲಾಗಿದೆ.
ವಿಶೇಷ ವೀಕ್ಷಕರ ನೇಮಕ:
ಧಾರವಾಡ ಜಿಲ್ಲೆಯಲ್ಲಿ ಒಟ್ಟು 13 ಪದವಿಪೂರ್ವ ಪೂರಕ ಪರೀಕ್ಷಾ ಕೇಂದ್ರಗಳಿವೆ. ಜಿಲ್ಲೆಯಾದ್ಯಂತ ಈ 13 ಪರೀಕ್ಷಾ ಕೇಂದ್ರಗಳಿಗೆ ಗೆಜೆಟೆಡ್ ಅಧಿಕಾರಿಗಳನ್ನು ವಿಶೇಷ ವೀಕ್ಷಕರೆಂದು (ಸಿಟ್ಟಿಂಗ್ ಸ್ಕಾ÷್ವಡ್) ನೇಮಕ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss