Thursday, August 18, 2022

Latest Posts

ಸೇನಾಪಡೆಯ ವಾಹನದ ಮೇಲೆ ಗ್ರೆನೇಡ್ ಎಸೆದ ಉಗ್ರರು: ಗುರಿತಪ್ಪಿ ರಸ್ತೆಯಲ್ಲಿಯೇ ಸ್ಫೋಟ, 6 ಮಂದಿಗೆ ಗಾಯ

ಶ್ರೀನಗರ: ಭಾರತೀಯ ಸೇನಾಪಡೆಯ ವಾಹನದ ಮೇಲೆ ಉಗ್ರರು ಎಸೆದ ಗ್ರೆನೇಡ್ ಒಂದು ಗುರಿತಪ್ಪಿ ರಸ್ತೆಯಲ್ಲಿಯೇ ಸ್ಫೋಟಗೊಂಡಿದ್ದು, ಪರಿಣಾಮ ಸ್ಥಳದಲ್ಲಿದ್ದ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು ,ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಗಸ್ತು ತಿರುಗಿ ರಸ್ತೆ ದಾಟುವ ವೇಳೆಯಲ್ಲಿ ಸೇನಾಪಡೆಗಳ ವಾಹನಗಳ ಮೇಲೆ ಉಗ್ರರು ಏಕಾಏಕಿ ಗ್ರೆನೇಡ್ ದಾಳಿ ನಡೆಸಿದ್ದಾರೆ. ಈ ವೇಳೆ ಗುರಿ ತಪ್ಪಿ ರಸ್ತೆಯೊಂದರಲ್ಲಿ ಗ್ರೆನೇಡ್ ಸ್ಫೋಟಗೊಂಡಿದೆ. ಪರಿಣಾಮ ಸ್ಥಳದಲ್ಲಿದ್ದ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆಂದು ತಿಳಿಸಿದ್ದಾರೆ

ಘಟನೆಯಲ್ಲಿ ಗಾಯಗೊಂಡ ನಾಗರೀಕರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು, 6 ಮಂದಿಯ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಗ್ರೆನೇಡ್ ದಾಳಿ ನಡೆಸಿದ ಕೂಡಲೇ ಉಗ್ರರು ಸ್ಥಳದಿಂದ ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!