Friday, July 1, 2022

Latest Posts

ಸೊರಬ ತಾಲೂಕು ಲಾಕ್ ಡೌನ್: ಅಧಿಕಾರಿಗಳಿಗೆ ಶಾಸಕ ಕುಮಾರ್ ಬಂಗಾರಪ್ಪ ಖಡಕ್ ಸೂಚನೆ

ಸೊರಬ: ಜಿಲ್ಲೆಗೆ ಆಗಮಿಸಿದ 8 ಜನರಲ್ಲಿ ಕೊರೋನಾ ವೈರಸ್ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಬೇಕು ಎಂದು ಶಾಸಕ ಕುಮಾರ್ ಬಂಗಾರಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಕೊರೋನಾ ಲಾಕ್‌ಡೌನ್ ಮೂರನೇ ಹಂತದಲ್ಲಿ ರಾಷ್ಟ್ರ, ರಾಜ್ಯಕ್ಕೆ ಆಘಾತಗಳು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೂ ಬಂದಿದೆ. 8 ಮಂದಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಾವು ಜಾಗೃತರಾಗಿರಬೇಕಾದ ಅಗತ್ಯವಿದೆ. ಆದರೆ ಆತಂಕಕ್ಕೆ ಒಒಳಗಾಗುವ ಅವಶ್ಯಕತೆ ಇಲ್ಲ. ಆಡಳಿತ ಯಂತ್ರ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.
ತಹಶೀಲ್ದಾರ್, ಸಿಪಿಐ, ತಾಲೂಕು ಆರೋಗ್ಯಾಧಿಕಾರಿ ಮತ್ತು ಆಶಾ ಕಾರ್ಯಕರ್ತೆಯರು ಈ ಹಿಂದಿನ ಲಾಕ್ಡೌನ್‌ನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಅಷ್ಟೇ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಾಗಿದೆ. ಕುಟುಂಬದ ರಕ್ಷಣೆಗಾಗಿ ಮನೆಗಳಲ್ಲಿಯೇ ಉಳಿದುಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss