Friday, July 1, 2022

Latest Posts

ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ: ದೇಶದಲ್ಲಿ 24 ಗಂಟೆಯಲ್ಲಿ ಪತ್ತೆಯಾದ ಹೊಸ ಪ್ರಕರಣಗಳೆಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ  31,118 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 482 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ  31,118ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ  94,62,810 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 41,985 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 88,89,585 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ4,35,603 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿವೆ.

ನಿನ್ನೆ ಒಂದೇ ದಿನ ದೇಶಾದ್ಯಂತ 482 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ  1,37,621 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss