Saturday, July 2, 2022

Latest Posts

ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ!

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೀಗ ಭಾರತದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನಕ್ಕೆ ತಲುಪಿದೆ.
ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ ದಾಖಲೆಯ 3,176 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ 87 ಜನರು ಕೊರೋನಾಗೆ ಬಲಿಯಾಗಿದ್ದು, ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 928ಕ್ಕೆ ಏರಿಕೆಯಾಗಿದೆ. ಈ ಮೂಲಕ ಕರ್ನಾಟಕ ಭಾರತದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ 4 ನೇ ಸ್ಥಾನಕ್ಕೆ ಏರಿಕೆಯಾಗಿದೆ.
ಇನ್ನು ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈವರೆಗೆ 9,70,169 ಕ್ಕೆ ಏರಿಕೆಯಾಗಿದೆ. ಒಟ್ಟು 24,929 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ವಿಶ್ವದ ಸೋಂಕಿತರ ಪಟ್ಟಿಯಲ್ಲಿ ಭಾರತ 3 ನೇ ಸ್ಥಾನಕ್ಕೇರಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss