Sunday, June 26, 2022

Latest Posts

ಸೋಮವಾರಪೇಟೆ ಎಪಿಎಂಸಿಗೆ ಡಿ.ಎಸ್ ಪೊನ್ನಪ್ಪ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಕುಶಾಲನಗರ: ಸೋಮವಾರಪೇಟೆ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಂದಿನ 20 ತಿಂಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಬೇಳೂರು ಕ್ಷೇತ್ರದ ಬಿಜೆಪಿ ಬೆಂಬಲಿತ ಡಿ.ಎಸ್.ಪೊನ್ನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸುದ ಕಾರಣ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಗೌಡಳ್ಳಿ ಕ್ಷೇತ್ರದ ಐರೀರ ವಿಜಯ 9 ಮತಗಳಿಸಿ ಜಯಶಾಲಿಯಾದರು. ಬಿಜೆಪಿ ಬೆಂಬಲಿತ ಶಿವಮಣಿ 6 ಮತಗಳನ್ನು ಪಡೆದು ಪರಾಭವಗೊಂಡರು.
ತಾಲೂಕು ತಹಶೀಲ್ದಾರ್ ಗೋವಿಂದರಾಜು ಚುನಾವಣಾ ಪ್ರಕ್ರಿಯೆ ನಡೆಸಿ ಚುನಾಯಿತರನ್ನು ಘೋಷಣೆ ಮಾಡಿದರು.
ಈ ಸಂದರ್ಭ ಸಮಿತಿ ಕಾರ್ಯದರ್ಶಿ ಶ್ರೀಧರ್, ಕಂದಾಯಾಧಿಕಾರಿ ಮಧುಸೂದನ್ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss