Sunday, June 26, 2022

Latest Posts

ಸೋಮವಾರಪೇಟೆ| ವಿದ್ಯಾರ್ಥಿ-ಪೋಷಕರಿಗೆ ಕೊರೋನಾ ಆತಂಕ ಬೇಡ: ಅಪ್ಪಚ್ಚುರಂಜನ್

ಸೋಮವಾರಪೇಟೆ: ಜೂನ್ 25 ರಿಂದ ಜುಲೈ 3ರ ತನಕ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ತೆಗೆದು ಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.
ತಾಲೂಕಿನಲ್ಲಿ 2544 ರೆಗ್ಯುಲರ್ ವಿದ್ಯಾರ್ಥಿಗಳು, 222 ರೆಗ್ಯುಲರ್ ರೆಪಿಟರ್ ವಿದ್ಯಾರ್ಥಿಗಳು, 65 ವಲಸೆ ವಿದ್ಯಾರ್ಥಿಗಳು ಸೇರಿದಂತೆ 2831 ವಿದ್ಯಾರ್ಥಿಗಳು ಈ ಭಾರಿ ಪರೀಕ್ಷೆ ಬರೆಯಲಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 273 ವಿದ್ಯಾರ್ಥಿಗಳು, ಓ.ಎಲ್.ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 259, ಕುಶಾಲನಗರ ಫಾತಿಮಾ ಕಾನ್ವೆಂಟ್‍ನಲ್ಲಿ 420, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 417, ಶನಿವಾರಸಂತೆ ಪದವಿ ಪೂರ್ವ ಕಾಲೇಜಿನಲ್ಲಿ 201, ಶನಿವಾರಸಂತೆ ಸೆಕ್ರೆಡ್ ಹಾರ್ಟ್ ಪ್ರೌಢಶಾಲೆಯಲ್ಲಿ 229, ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 217, ಸುಂಟಿಕೊಪ್ಪ ಸೈಂಟ್ ಮೇರೀಸ್ ಪ್ರೌಢಶಾಲೆಯಲ್ಲಿ 242, ಹೆಬ್ಬಾಲೆ ಪದವಿ ಪೂರ್ವ ಕಾಲೇಜಿನಲ್ಲಿ 170, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು 216, ನೆಲ್ಯಹುದಿಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ 187 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 1461 ಬಾಲಕಿಯರು , 1370 ಬಾಲಕರು, ಪರೀಕ್ಷೆ ಬರೆಯುತ್ತಾರೆ.
ಕೋವಿಡ್-19 ಹಿನ್ನಲೆ ಪರೀಕ್ಷಾ ಕೇಂದ್ರಗಳಲ್ಲಿ ಹಿಂದಿನ ದಿನಗಳಂದು ಸ್ಯಾನಿಟೈಸರ್ ಮಾಡಲಾಗುತ್ತದೆ. ಗೇಟ್ ಮುಂಭಾಗ ಆರೋಗ್ಯಧಿಕಾರಿಗಳಿಂದ ಥರ್ಮೊ ಸ್ಕ್ಯಾನಿಂಗ್, ವಿದ್ಯಾರ್ಥಿಗಳಿಗೆ ವಿಶೇಷ ವಿಶ್ರಾಂತಿ ಕೊಠಡಿ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಎರಡು ಮಾಸ್ಕಗಳನ್ನು ವಿತರಿಸಲಾಗಿದೆ. ಪ್ರವೇಶ ಪತ್ರದ ಹಿಂಬದಿಯಲ್ಲಿ ಪರೀಕ್ಷಾ ಕೇಂದ್ರದ ಹೆಸರು, ಕೊಠಡಿ ಸಂಖ್ಯೆ ಹಾಗೂ ಬೇಂಚ್ ಕ್ರಮ ಸಂಖ್ಯೆಯನ್ನು ಬರೆಯಲಾಗಿದೆ.
ವಿದ್ಯಾರ್ಥಿಗಳಿಗೆ ಪರೀಕ್ಷೆಗೂ ಮುನ್ನ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಸೂಚನೆ ನೀಡಲಾಗಿದೆ. ಸ್ಕೌಟ್ ಮತ್ತು ಗೈಡ್ಸ್ ಶಿಕ್ಷಕರನ್ನು ಪರೀಕ್ಷ ಕೇಂದ್ರಕ್ಕೆ ನಿಯೋಜಿಸಲಾಗಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss