Thursday, July 7, 2022

Latest Posts

ಸೋಮವಾರ ರಾತ್ರಿ ಸುರಿದ ಮಳೆ ಕುಂದಾಪುರ ಮತ್ತು ಬೈಂದೂರು ತಾಲೂಕುಗಳಲ್ಲಿ ಸಾಕಷ್ಟು ಹಾನಿ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸುರಿದ ಮಳೆ ಕುಂದಾಪುರ ಮತ್ತು ಬೈಂದೂರು ತಾಲೂಕುಗಳಲ್ಲಿ ಸಾಕಷ್ಟು ಹಾನಿಯುಂಟು ಮಾಡಿದೆ. ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ.

ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ಬಾಬು ಭಂಡಾರಿ ಅವರ ಮನೆಯ ಮೇಲೆ ಮರಬಿದ್ದು 1.50ಲಕ್ಷ ರೂ. ನಷ್ಟವಾಗಿದೆ. ಕುಂದಾಪುರ ತಾಲೂಕಿನ ಹರ್ಕೂರು ಗ್ರಾಮದ ಬಾಬಿ ಶೆಟ್ಟಿ, ನೂಜಾಡಿ ಗ್ರಾಮದ ಶೀನ ಆಚಾರಿ ಅವರ ಮನೆಗಳಿಗೆ ಭಾಗಶಃ ಹಾನಿಯಾಗಿ ತಲಾ 20ಸಾವಿರ ರೂ. ನಷ್ಟ ಅಂದಾಜಿಸಲಾಗಿದೆ. ಹಕ್ಲಾಡಿ ಗ್ರಾಮದ ಚೆನ್ನ ಆಚಾರಿ ಅವರ ಮನೆಯ ಮೇಲೆ ಮರಬಿದ್ದು ಅಂದಾಜು 15ಸಾವಿರ ರೂ. ನಷ್ಟ ಉಂಟಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss