ಹೊಸ ದಿಗಂತ ವರದಿ, ರಾಮನಗರ:
ಭಾರತೀಯ ಜನತಾ ಪಕ್ಷದಿಂದ ಸಾಮಾನ್ಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನರೇಂದ್ರ ಮೋದಿ ಭಾರತ ದೇಶದ ಪ್ರಧಾನ ಮಂತ್ರಿಯಾಗಿದ್ದಾರೆ ಆದ್ದರಿಂದ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿ ನೀವು ಕೂಡ ಮುಂದೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಪಡೆಯುವಂತೆ ಆಗಲಿ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ರಾಮನಗರ ತಾಲ್ಲೂಕಿನ ಕೂಟಗಲ್ ಗ್ರಾಮದ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ನಾನು ಕೂಡ ಗ್ರಾಮ ಪಂಚಾಯಿತಿ ಸದಸ್ಯನಾಗಿ ಶಾಸಕರಾಗಿ ಆಯ್ಕೆಯಾದ ನಾನು ಮಂತ್ರಿಯಾಗಿ ಅಧಿಕಾರ ಮಾಡುತ್ತಿದ್ದೇನೆ ಎಂದು ಅವರು ಹೇಳಿದರು
ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಉಜ್ವಲ ಯೋಜನೆ ಜಾರಿಗೆ ತಂದರು ಈ ಯೋಜನೆಯಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ ಎಂದರು
ಹಳ್ಳಿಗಳಲ್ಲಿ ವಾಸಿಸುವ ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಜಾರಿಗೆ ತಂದ ಕಿಸಾನ್ ಸನ್ಮಾನ ಯೋಜನೆಯಡಿಯಲ್ಲಿ ಲಕ್ಷಾಂತರ ರೈತರಿಗೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ 3 ಕಂತುಗಳಲ್ಲಿ ಆರು ಸಾವಿರ ಆಗು ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವತಿಯಿಂದ ನಾಲ್ಕು ಸಾವಿರ ರೂಪಾಯಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡುವುದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದೆ ಎಂದರು
ವಿಧಾನ ಪರಿಷತ್ ಸದಸ್ಯ ಸಿ. ಪಿ ಯೋಗೇಶ್ವರ್ ಮಾತನಾಡಿದ ಅವರು ಜಿಲ್ಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಸ್ವಧಿ೯ಸಿ ಸೋಲು ಗೆಲುವಿನ ಚಿಂತೆ ಮಾಡಬೇಡಿ ನಾವು ಗೆಲುವು ಸಾಧಿಸಿತ್ತೇನೆ ಎಂದು ಚುನಾವಣೆಗೆ ಸ್ಪರ್ಧಿಸಿ ಎಂದು ಹೇಳಿದರು
ಎಂ. ಎಲ್ ಸಿ ಪುಟ್ಟಣ್ಣ ಮಾತನಾಡಿ ಕುಮಾರ ಸ್ವಾಮಿ ಜಿಲ್ಲೆಯಲ್ಲಿ ಯಾವುದೋ ನಾಲ್ಕು ಕಟ್ಟಡಗಳನ್ನು ನಿರ್ಮಿಸಿ ಸುಮಾರು ಇಪ್ಪತ್ತು ವರ್ಷಗಳ ಕಾಲದಿಂದ ಅ ಕಟ್ಟಡಗಳನ್ನು ತೋರಿಸಿ ಜನರಿಗೆ ಮಂಕು ಬೂದಿ ಎರಚಿ ತಾನು ಮತ್ತು ತನ್ನ ಸಂಸಾರವನ್ನು ಚುನಾವಣೆ ಗೆದ್ದು ಬರುತ್ತಿದ್ದಾರೆ ಇನ್ನೂ ಮುಂದೆ ಆ ಕಾಲ ಮುಗಿದು ಹೋಯಿತು ಎಂದು ಹೇಳಿದರು
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಈಗ ಬಂದಿರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳು ಜಯ ಸಾಧಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಕಿವಿಮಾತು ಹೇಳಿದರು
ಜಿಲ್ಲೆಯಲ್ಲಿ ಕೋವಿಡ್ ನಿವ೯ಹಣೆ ಮಾಡುವಲ್ಲಿ ಸರ್ಕಾರ ಸಫಲವಾಗಿದೆ ಜಿಲ್ಲೆಯಲ್ಲಿ ನೀರಾವರಿ ಯೋಜನೆ ಜಾರಿಗೆ ನಮ್ಮ ಸರ್ಕಾರ ಕಂಕಣ ಬದ್ಧವಾಗಿದೆ ಈ ಗ್ರಾಮ ಪಂಚಾಯಿತಿ ಜಿಲ್ಲಾ ಮಟ್ಟದ ನಾಯಕರು ಹಾಗೂ ತಾಲ್ಲೂಕು ಮಟ್ಟದ ನಾಯಕರು ಶ್ರಮವಹಿಸಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಗೆಲುವು ಸಾಧಿಸಬೇಕೆಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅ ದೇವೇಗೌಡ. ಕೋಲಾರ ಲೋಕಸಭಾ ಸದಸ್ಯ ಮುನಿಸ್ವಾಮಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನ ಕಾಯಿ. ಓ. ಬಿ. ಸಿ ರಾಜ್ಯ ಉಪಾಧ್ಯಕ್ಷ ಎ ಎಸ್. ಬಸವರಾಜ್. ಜಿಲ್ಲಾಧ್ಯಕ್ಷ ಹುಲ್ಲಾವಾಡಿ ದೇವರಾಜ್. ಜಿಲ್ಲಾ ಉಪಾಧ್ಯಕ್ಷ ಸುರೇಶ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು. ಜಿಲ್ಲಾ ಮಾದ್ಯಮ ಪ್ರಮುಖ ಚಂದ್ರಶೇಖರ ರೆಡ್ಡಿ. ಬಿಡದಿ ಪ್ರಾಧಿಕಾರದ ಅಧ್ಯಕ್ಷ ವರದರಾಜ್ ಗೌಡ ನಗರ ಘಟಕದ ಅಧ್ಯಕ್ಷ ಪಿ ಶಿವಾನಂದ್. ನಗರ ಪ್ರಧಾನ ಕಾರ್ಯದರ್ಶಿ ನರೇಂದ್ರ. ದಶ೯ನ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು