ಹೊಸದಿಗಂತ ಆನ್ ಲೈನ್ ಡೆಸ್ಕ್:
ಲಘು ಹೃದಯಾಘಾತಕ್ಕೆ ಒಳಗಾಗಿ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಗೂಲಿಗೆ ಕರೆ ಮಾಡಿ ಅವರ ಆರೋಗ್ಯದ ಕುರಿತು ವಿಚಾರಿಸಿದ್ದಾರೆ.
ಇನ್ನು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಗಂಗೂಲಿ ಪತ್ನಿ ಡೋನಾ ಅವರ ಜೊತೆ ಕೂಡ ಸೌರವ್ ಗಂಗೂಲಿ ಆರೋಗ್ಯದ ಬಗ್ಗೆ ಮೋದಿ ಚರ್ಚೆ ನಡೆಸಿದ್ದಾರೆ.
ಸದ್ಯ ಗಂಗೂಲಿಯವರಲ್ಲಿ ಜ್ವರ ಕಡಿಮೆಯಾಗಿದೆ. ಎಚ್ಚರವಾಗಿದ್ದು, ಮಾತನಾಡುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ವಹಿಸಿದೆ. ಕಾಲಕಾಲಕ್ಕೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.