ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ನಾಳೆ ಸೌರವ್ ಗಂಗೂಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ. ಗಂಗೂಲಿ ಮನೆಗೆ ತೆರಳಿದ ಬಳಿಕ ಪ್ರತಿ ನಿತ್ಯ ತಜ್ಞ ವೈದ್ಯರು ಮನೆಯಲ್ಲಿಯೇ ವೈದ್ಯಕೀಯ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ವುಡ್ ಲ್ಯಾಂಡ್ಸ್ ಆಸ್ಪತ್ರೆ ವೈದ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೌರವ್ ಗಂಗೂಲಿ ಇತ್ತೀಚೆಗೆ ಲಘು ಹೃದಯಾಘಾತಕ್ಕೀಡಾಗಿದ್ದು, ಕೂಡಲೇ ಅವರನ್ನು ಕೋಲ್ಕತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
BCCI President Sourav Ganguly to be discharged from the hospital tomorrow, will be monitored at home on a daily basis: Dr Rupali Basu MD & CEO Woodlands Hospital, Kolkata pic.twitter.com/chGYrza5kF
— ANI (@ANI) January 5, 2021