Thursday, June 30, 2022

Latest Posts

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ: ಕಾಸರಗೋಡು ಜಿಲ್ಲೆಯಲ್ಲಿ ಬಿಜೆಪಿ ಉತ್ತಮ ಸಾಧನೆ

ಹೊಸ ದಿಗಂತ ವರದಿ, ಕಾಸರಗೋಡು:

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಜಿಲ್ಲೆಯ 10 ಗ್ರಾಮ ಪಂಚಾಯತ್‌ಗಳಲ್ಲಿ ಮತ್ತು ಮಂಜೇಶ್ವರ ಬ್ಲಾಕ್ ಪಂಚಾಯತ್‌ನಲ್ಲಿ ಅತ್ಯಂತ ದೊಡ್ಡ ಪಕ್ಷವಾಗುವುದರ ಮೂಲಕ ಬಿಜೆಪಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ , ನ್ಯಾಯವಾದಿ ಕೆ.ಶ್ರೀಕಾಂತ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್‌ನಲ್ಲಿ , ಮೊಗ್ರಾಲ್‌ ಪುತ್ತೂರು, ಎಣ್ಮಕಜೆ ಸಹಿತ 6 ಪಂಚಾಯತ್‌ಗಳಲ್ಲಿ ಬಿಜೆಪಿಯ ಸಾಧನೆ ನಿರ್ಣಾಯಕವಾಗಿದೆ. ಪುತ್ತಿಗೆ ಮತ್ತು ಎಡನೀರು ಜಿಲ್ಲಾ ಪಂಚಾಯತ್ ಡಿವಿಷನ್‌ಗಳಲ್ಲಿ ಬಹುಮತ ಹೆಚ್ಚಿಸಲು ಬಿಜೆಪಿಗೆ ಸಾಧ್ಯವಾಗಿದೆ. ವರ್ಕಾಡಿ ಜಿಲ್ಲಾ ಡಿವಿಷನ್ ನಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ ಉತ್ತಮ ಸಾಧನೆ ಮಾಡಿದೆ. ಮಂಜೇಶ್ವರ ಬ್ಲಾಕ್ ಪಂಚಾಯತ್‌ನಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಎರಡು ಡಿವಿಷನ್‌ಗಳು ಹೆಚ್ಚಳಗೊಂಡಿವೆ ಎಂದು ಅವರು ವಿವರಣೆ ನೀಡಿದರು.
ಕಾರಡ್ಕ , ಕುಂಬ್ಡಾಜೆ, ಕುಂಬಳೆ, ಮಂಜೇಶ್ವರ, ಮೀಂಜ, ಪೈವಳಿಕೆ, ಬದಿಯಡ್ಕ , ವರ್ಕಾಡಿ ಗ್ರಾಮ ಪಂಚಾಯತ್‌ಗಳಲ್ಲಿ ಅತೀ ಹೆಚ್ಚು ಸೀಟು ಪಡೆಯಲು ಸಾಧ್ಯವಾಗಿರುವುದು ಬಿಜೆಪಿಯ ಅದ್ವಿತೀಯ ಸಾಧನೆಯಾಗಿದೆ. ಎಡರಂಗ ಮತ್ತು ಐಕ್ಯರಂಗ ಒಕ್ಕೂಟಗಳು ಒಳ ಒಪ್ಪಂದ ಮಾಡಿಕೊಳ್ಳದಿದ್ದರೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಸ್ಥಾನಗಳನ್ನು ಪಡೆಯಲು ಸಾಧ್ಯವಾಗುತ್ತಿತ್ತು ಎಂದು ಕೆ.ಶ್ರೀಕಾಂತ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss