Saturday, July 2, 2022

Latest Posts

ಸ್ಥಳೀಯ ಕೈಗಾರಿಕೆ, ಕಂಪನಿಗಳಲ್ಲಿ ಕನ್ನಡಿಗರಿಗೆ ಶೇಕಡಾವಾರು ಉದ್ಯೋಗ: ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯ

ಹೊಸ ದಿಗಂತ ವರದಿ, ಮಂಗಳೂರು:

ಮಂಗಳೂರು: ಸ್ಥಳೀಯವಾಗಿ ಇರುವ ಕೈಗಾರಿಕೆ,ಕಂಪನಿಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಶೇಕಡಾ ವಾರು ಉದ್ಯೋಗ ಕಡ್ಡಾಯವಾಗಿ ನೀಡುವಂತಾಗಲು ಸರೋಜಿನಿ ಮಹಿಷಿ ವರದಿಯನ್ನು ಸಮರ್ಪವಾಗಿ ಅನುಷ್ಟಾನಗೊಳಿಸಲು ಸರಕಾರ ಮುಂದಾಗಬೇಕು ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಸದನದಲ್ಲಿ ಒತ್ತಾಯಿಸಿದ್ದಾರೆ.

50ಕ್ಕಿಂತ ಅಧಿಕ ಉದ್ಯೋಗಿಗಳು ಇದ್ದಲ್ಲಿ ಈ ನಿಯಮ ಜಾರಿಯಾಗಬೇಕಿದೆ. ಸಿ ಮತ್ತು ಡಿ ಗ್ರೂಪ್ ಗಳಲ್ಲಿ ಶೇ 100, ಬಿ ಗ್ರೂಪ್ ಗೆ ಶೇ 85, ಎ ಗ್ರೂಪ್ ಗೆ ಶೇ 65, ಉದ್ಯೋಗವನ್ನು ನೀಡಬೇಕೆಂಬ ನಿಯಮವಿದೆ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆದು ವರದಿ ಅನುಷ್ಟಾನ ಮಾಡಲು ಅವಕಾಶ ನೀಡಲಾಗಿದೆ. ಕೈಗಾರಿಕಾ ಉದ್ಯೋಗ ನೀತಿಯಲ್ಲಿ ಇದರ ಬಗ್ಗೆ 2019ರಲ್ಲಿ ತಿದ್ದು ಪಡಿ ಮಾಡಲಾಗಿದೆ.

ಆದರೆ ಇದನ್ನು ಕಟ್ಟು ನಿಟ್ಟಾಗಿ ಜಾರಿ ಮಾಡಿ ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಸರಕಾರ ಮಾಡಬೇಕಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಒತ್ತಾಯಿಸಿದರು.
ಇದಕ್ಕೆ ಸದನದಲ್ಲಿ ಉತ್ತರಿಸಿದ ಕಾರ್ಮಿಕ ಸಚಿವ ಹೆಬ್ಬಾರ್ ಈ ಬಗ್ಗೆ ಗಮನಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss