Monday, August 15, 2022

Latest Posts

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ: ರಾಜ್ಯಾಧ್ಯಕ್ಷ ನಳಿನ್

ಯಾದಗಿರಿ : ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆೆಗೆ ಕಾರ್ಯಕರ್ತರು ಸಿದ್ದಗೊಳಿಸಲು ರಾಜ್ಯ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಸನ್ನಿದ್ಧಗೊಳಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಅವರು ತಿಳಿಸಿದರು.
ಅವರು ಜಿಲ್ಲೆಯ ಶಹಾಪೂರ ಪಟ್ಟಣದಲ್ಲಿ ಪದಾಧಿಕಾರಿಗಳ ಸಭೆ ನಡಸುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಪಕ್ಷದ ನೂತನ ಪದಾಧಿಕಾರಿಗಳನ್ನು ಮುಖ್ಯವಾಹಿನಿಗೆ ತರಲು ಪೂರ್ವ ತಯ್ಯಾರಿಗೆ ರಾಜ್ಯದ ಎಲ್ಲಾ ಜಿಲ್ಲಾಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ ಎಂದು ಹೇಳಿದರು.
ಶಹಾಪುರ ನಗರದ ಮೊಟಗಿ ರೆಸ್ಟೋರೆಂಟ ಹಾಲ್‌ನಲ್ಲಿ ಕರೆದ ಯಾದಗಿರಿ ಜಿಲ್ಲಾ ಮಟ್ಟದ ಬಿಜೆಪಿ ಕೋರ್ ಕಮೀಟಿ ಸಭೆಯನ್ನು ಅಯೋಜಿಸಲಾಗಿದೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಉತ್ತಮ ಕೆಲಸ ಮಾಡಿ ಜನರ ಮನಗೆದ್ದಿದೆ. ಅದಕ್ಕಾಗಿ ಪ್ರತಿಯೊಂದು ಬೂತ್ ಮಟ್ಟದಲ್ಲಿ ಓರ್ವ ಪ್ರಮುಖರನ್ನು ನೇಮಕ ಮಾಡಿಕೊಂಡು, ಅವರ ಮುಖಾಂತರ ಜನಪರ ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟದ ಜನರಿಗೆ ತಿಳಿಸಲು ಸಜ್ಜು ಗೊಳಿಸಲಾಗುವುದು ಎಂದರು.
ಆಯಾ ಬೂತ್ ಗಳಲ್ಲಿ ಕಾರ್ಯಕರ್ತರನ್ನು ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ಕ್ರಮಕ್ಕೆ ಪೂರಕ ಯೋಜನೆ ಹಾಕಿಕೊಳ್ಳುವ ಉದ್ದೇಶವಿದ್ದು, ಈ ಸಭೆಯಲ್ಲಿ ಪ್ರಮುಖ ವಿಷಯಗಳನ್ನು ಚರ್ಚೆ ಮಾಡಿ ಸಕಲ ಪದಾಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡುವದಾಗಿ ಅವರು ತಿಳಿಸಿದರು. ಅಲ್ಲದೆ ಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದಾಗಿ ಭರವಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಯಚೂರು ಸಂಸದ ರಾಜಾ ಅಮರೇಶ ನಾಯಕ್ , ಶಾಸಕರಾದ ನರಸಿಂಹ ನಾಯಕ, ಮಾಲಕಯ್ಯ ಗುತ್ತೇದಾರ, ಪಕ್ಷದ ಪ್ರಧಾನ ಕಾರ್ಯದರ್ಶಿ ಅಶ್ವತ ನಾರಯಣ ಮತ್ತು ಮಾಜಿ ಶಾಸಕ ಗುರುಪಾಟೀಲ್ , ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಶರಣಭೂಪಾಲ ರೆಡ್ಡಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss