ಮ್ಯಾಡ್ರಿಡ್: ಕೊರೋನಾ ಸೋಂಕು ವಿಶ್ವಾದ್ಯಂತ ಹರಡಿದ್ದು, ಯೂರೋಪ್ ನಲ್ಲಿ ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಸ್ಪೇನ್ ನಲ್ಲಿ ಈಗಾಗಲೇ ಎರಡು ಸಾವಿರಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಸ್ಪೇನ್ ನಲ್ಲಿ ವೈರಸ್ ನಿಂದ 288 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಕೊರೋನಾ ಸೋಂಕಿತರ ಸಂಖ್ಯೆ 7,753ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ ಸ್ಪೇನ್ ನಲ್ಲಿ ನೂರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿಶ್ವದಲ್ಲಿ ಕೊರೋನಾ ಸೋಂಕಿನಿಂದ 6 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 1,60,000 ಮಂದಿಗೆ ಸೋಂಕು ದೃಢಪಟ್ಟಿದೆ.
ಭಾರತದಲ್ಲಿ ಸೋಂಕಿತರ ಸಂಖ್ಯೆ ನೂರು ದಾಟಿದ್ದು, ಕರ್ನಾಟಕದಲ್ಲಿ ಇದುವರೆಗೂ ಏಳು ಪ್ರಕರಣಗಳು ಪತ್ತೆಯಾಗಿದೆ.