Tuesday, July 5, 2022

Latest Posts

ಸ್ಮಶಾನದ ಮೇಲ್ಛಾವಣಿ ಕುಸಿತ: ಮೃತಪಟ್ಟವರ ಸಂಖ್ಯೆ 23 ಕ್ಕೆ ಏರಿಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸಂಬಂಧಿಕನ ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ಸ್ಮಶಾನದಲ್ಲಿನ‌ ಕಟ್ಟಡದ ಮೇಲ್ಛಾವಣಿ ಕುಸಿದು ಮೃತಪಟ್ಟವರ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ.
ಗಾಜಿಯಾಬಾದ್​ನಲ್ಲಿ ಮಳೆಯಿಂದ ರಕ್ಷಿಸಿಕೊಳ್ಳಲು ಸ್ಮಶಾನದಲ್ಲಿದ್ದ ಸಂಕೀಣವೊಂದರ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ಜೋರಾಗಿ ಮಳೆ ಬೀಳುತ್ತಿದ್ದರಿಂದ ಚಾವಣಿ ಕುಸಿದಿದ್ದು 23 ಮಂದಿ ಮೃತಪಟ್ಟಿದ್ದಾರೆ.
ಖಲಾರ್ಸಿ ಗ್ರಾಮದ ವ್ಯಕ್ತಿಯೊಬ್ಬ ಮೃತನಾಗಿದ್ದ. ಆತನ ಅಂತ್ಯಸಂಸ್ಕಾರ ನಡೆಸಲೆಂದು ಸಂಬಂಧಿಕರು ಭಾನುವಾರ ಬೆಳಗ್ಗೆ ಶವಾಗಾರಕ್ಕೆ ಬಂದಿದ್ದಾರೆ. ಅಂತ್ಯಕ್ರಿಯೆ ನಡೆಸುವ ವೇಳೆಯಲ್ಲಿ ಜೋರಾಗಿ ಮಳೆ ಸುರಿದಿದೆ. ಆ ಹಿನ್ನೆಲೆಯಲ್ಲಿ ಎಲ್ಲರೂ ಅಲ್ಲಿನ ಛಾವಣಿಯ ಒಳಗೆ ಸೇರಿಕೊಂಡಿದ್ದಾರೆ. ಈ ವೇಳೆ ಭಾರೀ ಮಳೆಗೆ ಛಾವಣಿ ಕುಸಿದುಬಿದ್ದಿದೆ.
ಚಾವಣಿ ಕೆಳಗೆ ಸಿಲುಕಿರುವವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ.
ಘಟನೆ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಂತಾಪ ವ್ಯಕ್ತಪಡಿಸಿದ್ದು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss