ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ಸಂಜನಾ ಹಾಗೂ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಎನ್ಡಿಪಿಎಸ್ ನ್ಯಾಯಾಲಯದಲ್ಲಿ ನಟಿ ರಾಗಿಣಿ ಹಾಗೂ ಸಂಜನಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಇಂದು ನಟಿಯರಿಗೆ ಜಾಮೀನು ಸಿಗಲಿದೆಯೋ ಅಥವಾ ಜೈಲುವಾಸವೇ ಮುಂದುವರಿಯಲಿದೆಯೋ ಎಂಬ ನಿರ್ಧಾರವಾಗಲಿದೆ.
ಈಗಾಗಲೇ ಸಂಜನಾ ಹಾಗೂ ರಾಗಿಣಿ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದ್ದು, ಜೈಲಿನಲ್ಲಿಯೇ ವಿಚಾರಣೆ ನಡೆಯುತ್ತಿದೆ.