Wednesday, August 10, 2022

Latest Posts

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ: ನಿರೂಪಕಿ ಅನುಶ್ರೀ ಮನೆಗೆ ಬಂದು ನೋಟಿಸ್ ಕೊಟ್ಟ ಸಿಸಿಬಿ ಪೊಲೀಸರು

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧಿಸಿ ಮಂಗಳೂರಿನ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಅನುಶ್ರೀ ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ನಿರೂಪಕಿ ಅನುಶ್ರೀ ಮನೆಗೆ ಬಂದು ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು, ಸೆ.26 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರುಅನುಶ್ರೀಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ಅವರನ್ನು ಬಂಧಿಸಿದ್ದರು. ಇಂತಹ ತರುಣ್ ಅನ್ನು ತೀವ್ರ ವಿಚಾರಣೆ ನಡೆಸಿದ್ದಂತ ಸಿಸಿಬಿ ಪೊಲೀಸರಿಗೆ ನಿರೂಪಕಿ ಅನುಶ್ರೀ ಅವರ ಹೆಸರನ್ನು ಬಾಯ್ಬಿಟ್ಟಿದ್ದ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss