Wednesday, August 17, 2022

Latest Posts

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಕೊನೆಗೂ ಆದಿತ್ಯ ಆಳ್ವ ಅರೆಸ್ಟ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್‌ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂದಿಸಿದ್ದಾರೆ.

ಆದಿತ್ಯ ಆಳ್ವನನ್ನು ಸೋಮವಾರ ರಾತ್ರಿ ಚೆನ್ನೈನಲ್ಲಿ  ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, ಸದ್ಯ ಈಗ ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು, ತನಿಖೆ ಆರಂಭವಾಗುತ್ತಿದ್ದಂತೆ ಆದಿತ್ಯ ಪರಾರಿಯಾಗಿದ್ದ.  ಮುಂಬೈ ಸೇರಿದಂತೆ ಹಲವೆಡೆ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ ಆದಿತ್ಯ ಕಳೆದ 15 ದಿನಗಳಿಂದ ಚೆನ್ನೈ ಹೊರವಲಯದ ರೆಸಾರ್ಟ್​ನಲ್ಲಿ ಬಚ್ಚಿಟ್ಟುಕೊಂಡಿದ್ದ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!