Sunday, August 14, 2022

Latest Posts

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಬಿನೇಶ್ ಕೊಡಿಯೇರಿ ಮತ್ತೆ ನಾಲ್ಕು ದಿನ ಇಡಿ ವಶಕ್ಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಕೇರಳ ಕಮ್ಯೂನಿಷ್ಠ ಪಾರ್ಟಿ ಆಫ್ ಇಂಡಿಯಾ(ಮ್ಯಾಕ್ಸಿಸ್) ನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರ ಬಿನೇಶ್ ಕೊಡಿಯೇರಿ ಅವರನ್ನು ಇಡಿ ಅಧಿಕಾರಿಗಳು ಮತ್ತೆ ನಾಲ್ಕು ದಿನ ವಶಕ್ಕೆ ಪಡೆದಿದ್ದಾರೆ.
ಇಂದು ಆರೋಪಿಯನ್ನು ಇಡಿ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಆರೋಪಿಯನ್ನು ನವೆಂಬರ್ ೧೧ ರವರೆಗೆ ಇಡಿ ಅಧಿಕಾರಿಗಳ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
ಈ ಹಿಂದೆ ಕೂಡ ಪ್ರಕರಣ ಸಂಬಂಧ ಬಿನೀಶ್ ಕೊಡಿಯೇರಿಯನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.ಡ್ರಗ್ಸ್ ಪೆಡ್ಲರ್ ಅನೂಪ್ ಗೆ ಹಣಕಾಸಿನ ನೆರವು ನೀಡಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಇದೀಗ ಇಡಿ ಕೇರಳದ ಮಾಜಿ ಗೃಹ ಸಚಿವ ಹಾಗೂ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರ ಬಿನೇಶ್ ಕೊಡಿಯೇರಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss