ಹೊಸದಿಗಂತ ಆನ್ ಲೈನ್ ಡೆಸ್ಕ್:
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿದ್ದ ಆರೋಪಿ ವಿರೇನ್ ಖನ್ನಾಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ಪ್ರಕರಣದ ಸಂಬಂಧ ಬೆಂಗಳೂರು ಸೇರಿದಂತೆ ವಿವಿಧ ಕಡೆ ದೊಡ್ಡ ಮಟ್ಟಿಗೆ ಪಾರ್ಟಿ ನಡೆಸುತ್ತಿದ್ದ ವಿರೇನ್ ಖನ್ನಾನನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು.
ಇದೀಗ ಪರಪ್ಪನ ಅಗ್ರಹಾರ ಸೇರಿದ್ದ ಆರೋಪಿ ವಿರೇನ್ ಖನ್ನಾಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.