ಬೆಂಗಳೂರು : ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಸಿಸಿಬಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಅಧಿಕಾರಿಗಳು ಸೋಮವಾರ ಸಿಸಿಬಿ ಕಚೇರಿಗೆ ಬಂದು ಮಾಹಿತಿ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ದಂಧೆಯ ಬಗ್ಗೆ ನನಗೆ ಮಾಹಿತಿ ಇದೆ. ಪೊಲೀಸರು ರಕ್ಷಣೆ ನೀಡುವುದಾದರೇ ಮಾಹಿತಿ ನೀಡುವುದಾಗಿ ಹೇಳಿದ್ದರು . ಈ ಹಿನ್ನೆಲೆ ಅವರಿಗೆ ಎನ್ ಸಿಬಿ ಮಾಹಿತಿ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ಹೀಗಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸೋಮವಾರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಅಧಿಕಾರಿಗಳ ಮುಂದೆ ಮಾಹಿತಿಗಾಗಿ ಹಾಜರಾಗುವ ಸಂಭವ ಇದೆ.