ಹೊಸದಿಗಂತ ವರದಿ,ಬಾಗಲಕೋಟೆ:
ಮತ್ತೆ ಸ್ವಂತ ಬಲದಿಂದ ರಾಜ್ಯದಲ್ಲಿ ಬಿಜೆಪಿ ಪಕ್ಷ 150 ಸೀಟುಗಳನ್ನು ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣೆಯನ್ನು ಹಿಡಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಶ್ವಾಸ ವ್ಯಕ್ತಪಡಿಸಿದರು.
ನಿರಾಣಿ ಉದ್ಯಮ ಸಂಸ್ಥೆಯಿಂದ ಜಿಲ್ಲೆಯ ಕೆರಕಲಮಟ್ಟಿ ಗ್ರಾಮದಲ್ಲಿರುವ ಕೇದರನಾಥ ಶುಗರ್ ಪುನರಾರಂಭ ಹಾಗೂ ಕಾರ್ಖಾನೆಗಳ ವಿವಿಧ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಬೇಕು. ಮತ್ತೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು, ಅಮಿತ್ ಶಾ ಅವರು ಗೃಹ ಮಂತ್ರಿಯಾಗಿ ಆಡಳಿತವನ್ನು ದೇಶಕ್ಕೆ ನೀಡಬೇಕು ಎಂದು ನಾನು ದೇವಸ್ಥಾನಕ್ಕೆಲ್ಲಾ ಹೋದ ಕಡೆ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬಹಿರಂಗಪಡಿಸಿದರು.
ರಾಜ್ಯ ಮತ್ತು ಕೇಂದ್ರಸರ್ಕಾರ ರೈತರ ಬಗ್ಗೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡುತ್ತಿದೆ ಎಂದು ಹೇಳಿದರು.