Tuesday, July 5, 2022

Latest Posts

ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿಗೆ ಕರೆ ಮಾಡಿ ಶುಭ ಕೋರಿದ ನೇಪಾಳ ಪ್ರಧಾನಿ!

ನವದೆಹಲಿ:  74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಭಾರತೀಯರಿಗೆ ಶುಭ ಕೋರಿದ್ದಾರೆ.
ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು, 74ನೇ ಸ್ವಾತಂತ್ರ್ಯ ದಿನ ಆಚರಿಸಿಕೊಳ್ಳುತ್ತಿರುವ ಭಾರತಕ್ಕೆ ಶುಭ ಕೋರಿದರು. ಅಂತೆಯೇ ಭಾರತದ ಜನರ ಹೆಚ್ಚಿನ ಪ್ರಗತಿ ಮತ್ತು ಸಮೃದ್ಧಿಗೆ ಶುಭಾಶಯ ಕೋರುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss