ಕೊಪ್ಪಳ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಒಂಚಾಯತ್ ವತಿಯಿಂದ ಆಯೋಜಿಸಿದ್ದ 74ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸರಳವಾಗಿ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ನೆರವೆರಿಸಿದರು.
ಮೊದಲಿಗೆ ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಹಾಗೂ ಬಿ.ಆರ್.ಅಂಬೇಡ್ಕರ್ ಅವರಿಗೆ ಪುಷ್ಪನಮನ ಸಲ್ಲಿಸಿದರು.
ನಂತರ ಪಥಸಂಚಲನ ವಿಕ್ಷಣೆ ನಡೆಸಿ, ಪೊಲೀಸ್, ಗ್ರಹರಕ್ಷಕದಳ, ಎನ್.ಸಿ.ಸಿ. ಅರಣ್ಯ ಇಲಾಖೆಯ, ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳಿಂದ ಹಾಗೂ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು.
ನಂತರ ಮಾತನಾಡಿ, ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ನಮ್ಮ ಆಧ್ಯ ಕರ್ತವ್ಯವಾಗಿದೆ. ಅವರ ತ್ಯಾಗ ಬಲಿಧಾನ ನಮ್ಮ ಯುವ ಪೀಳಿಗೆಯ ಆದರ್ಶ ವಾಗಬೇಕು ಎಂದು ಹೇಳಿದ ಅವರು, ಜಿಲ್ಲೆಯ ಅಭಿವೃದ್ಧಿಗಾಗಿ ಪಣ ತೋಡಲಾಗುವುದು ಎಂದು ಹೇಳಿದರು. ಅದರಂತೆ ಕೊವಿಡ್-19 ಗೆ ಯಾರು ಭಯ ಪಡಬೇಕಾಗಿಲ್ಲ. ಸೋಂಕು ತೊಲಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿಸಿದರು.
ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಜಿ.ಪಂ. ಅಧ್ಯಕ್ಷ ವಿಶ್ಚನಾಥರಡ್ಡಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶಗೌಡ ಪಾಟೀಲ್, ತಾ.ಪಂ.ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್, ಜಿಲ್ಲಾ ಎಸ್ಪಿ ಜಿ.ಸಂಗೀತಾ, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿ.ಪಂ.ಸಿಇಓ ರಘುನಂದನಮೂರ್ತಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.