ಬಳ್ಳಾರಿ: ಹಂಪಿ ಉತ್ಸವಕ್ಕೆ ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಒದಗಿಸಲು ಬಳ್ಳಾರಿ ಜಿಲ್ಲಾಡಳಿತ ತೀರ್ಮಾನಿಸಿದೆ.
ಜ.10 ಮತ್ತು 11ರಂದು ವಿಶ್ವವಿಖ್ಯಾತ ಹಂಪಿ ಉತ್ಸವ ಅದ್ದೂರಿಯಾಗಿ ನಡೆಯಲಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿ ಎಂದು ಉದ್ದೇಶದಿಂದ ಜಿಲ್ಲಾಡಳಿತ ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಈ ವ್ಯವಸ್ಥೆ ಮಾಡಿದೆ.
ಹೊಸಪೇಟೆ ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಿಂದ ಉಚಿತ ಬಸ್ ಸೇವೆ ಕಲ್ಪಿಸಲು ನಿರ್ಧರಿಸಲಾಗಿದೆ. ಜ.10 ಮತ್ತು 11ರಂದು ಹೊಸಪೇಟೆಯ ವಿವಿಧ ಬಡಾವಣೆಗಳಿಂದ ಹಾಗೂ ಹೊಸಪೇಟೆಯ ಕೇಂದ್ರ ಬಸ್ ನಿಲ್ದಾಣದಿಂದ ಹಂಪಿ ಕಡೆಗೆ ಹೋಗುವ ಮತ್ತು ಮರಳಿ ಕೇಂದ್ರ ಬಸ್ ನಿಲ್ದಾಣಕ್ಕೆ ಮತ್ತು ವಿವಿಧ ಬಡಾವಣೆಗಳಿಗೆ ಉಚಿತ ಬಸ್ ಸಂಚಾರ ಕಲ್ಪಿಸಲಾಗಿದೆ.