Wednesday, July 6, 2022

Latest Posts

ಹಕ್ಕಿ ಜ್ವರದ ಭೀತಿ: ‘ರಾಜ್ಯ ವಿಪತ್ತು’ ಘೋಷಿಸಿದ ಕೇರಳ!

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೋರೋನಾ ಸೋಂಕಿನ ಪ್ರಮಾಣ ವ್ಯಾಪಕವಾಗಿ ಹರಡುತ್ತಿದ್ದು, ಇದರ ಜೊತೆಗೆ ಇದೀಗ ಹಕ್ಕಿ ಜ್ವರ ಭೀತಿ ಶುರುವಾಗಿದೆ.
ಹೌದು ಈಗ ಕೆಲವು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇದೀಗ ಕೇರಳದ ಎರಡು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿರುವ ಕಾರಣ, ರಾಜ್ಯ ಸರಕಾರ ಈ ಕಾಯಿಲೆಯನ್ನು ‘ರಾಜ್ಯ ವಿಪತ್ತು’ ಎಂದು ಘೋಷಿಸಿದೆ.
ಇನ್ನು ಹಿಮಾಚಲ ಪ್ರದೇಶದಲ್ಲಿ ಕೂಡ ಸೋಮವಾರ ಹಕ್ಕಿಜ್ವರದ ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಈಗಾಗಲೇ ಕಂಡುಬಂದಿವೆ. ಇದರೊಂದಿಗೆ ಒಟ್ಟು ನಾಲ್ಕು ರಾಜ್ಯಗಳಲ್ಲಿ ಈ ಕಾಯಿಲೆ ಕಾಣಿಸಿಕೊಂಡಂತಾಗಿದೆ.
ಕೇರಳದ ಅಳಪ್ಪುಳದ ಕಾರ್ತಿಪಳ್ಳಿ ಹಾಗೂ ಕುಟ್ಟನಾಡ, ಕೋಟ್ಟಯಂನ ನೀಂದೂರ್‌ನಲ್ಲಿ ಹಕ್ಕಿ ಜ್ವರದ ಪ್ರಕರಣಗಳು ಕಂಡುಬಂದ ಕಾರಣ ರಾಜ್ಯದಲ್ಲಿ ಈ ಜ್ವರದ ಹರಡುವಿಕೆಯನ್ನು ತಡೆಯಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಪಶು ಸಂಗೋಪನಾ ಇಲಾಖೆ ನಿರ್ದೇಶಕ ಡಾ.ಕೆ.ಎಂ.ದಿಲೀಪ್‌ ತಿಳಿಸಿದರು.
ಇನ್ನು ಬೇರೆ ಜಿಲ್ಲೆಗಳಿಗೆ ರೋಗ ಹರಡದಂತೆ ಮಾಡಲು ಈಗಾಗಲೇ 50,000ದಷ್ಟು ಹಕ್ಕಿಗಳನ್ನು ಕೊಲ್ಲಲಾಗಿದೆ. ಮುಂಜಾಗ್ರತಾ ಕ್ರಮವಾಗಿ, ಕೇರಳದಿಂದ ಕೋಳಿ ಹಾಗೂ ಮೊಟ್ಟೆಗಳನ್ನು ತರುವುದಕ್ಕೆ ತಮಿಳುನಾಡು ನಿರ್ಬಂಧ ವಿಧಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss