Sunday, June 26, 2022

Latest Posts

ಹಣ್ಣು, ತರಕಾರಿಗಳ ರಿಟೇಲ್ ಮಾರಾಟಕ್ಕೆ ಸೂಕ್ತ ವ್ಯವಸ್ಥೆ : ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು: ತರಕಾರಿ ಹಾಗೂ ಹಣ್ಣುಗಳ ರಿಟೇಲ್ ಮಾರಕ್ಕೆ ಶೀಘ್ರವೇ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಮಾರುಕಟ್ಟೆಯ ತರಕಾರಿ ಹಾಗೂ ಹಣ್ಣುಹಂಪಲು ಸಗಟು ವ್ಯಾಪಾರ ಬೈಕಂಪಾಡಿಯ ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರವಾಗಿದೆ. ಆದರೆ ಅಲ್ಲಿ ಸೂಕ್ತ ವ್ಯವಸ್ಥೆ ಇಲ್ಲವೆಂಬ ಆರೋಪ ವ್ಯಾಪಾರಿಗಳದ್ದು. ಜತೆಗೆ ರಿಟೇಲ್ ವ್ಯಾಪಾರಸ್ಥರಿಗೆ ಸೂಕ್ತ ಸ್ಥಳ ನಿಗದಿಪಡಿಸಲಾಗಿಲ್ಲ. ಸೆಂಟ್ರಲ್ ಮಾರುಕಟ್ಟೆಯಲ್ಲಿದ್ದ ಇತರ ರಿಟೇಲ್ ವ್ಯಾಪಾಸ್ಥರಿಗೂ ಯಾವುದೇ ಪರ್ಯಾಯ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.
ಈ ಸಂದರ್ಭ ಮಾತನಾಡಿದ ಸಂಸದ ನಳಿನ್ ಕುಮಾರ್, ಈ ಬಗ್ಗೆ ಈಗಾಗಲೇ ಚರ್ಚೆ ಆಗಿದೆ. ತರಕಾರಿ ಹಣ್ಣು ಸಗಟು ವ್ಯಾಪಾರ ಬೈಕಂಪಾಡಿಗೆ ಸ್ಥಳಾಂತರಗೊಂಡಿದ್ದು, ವ್ಯಾಪಾರಸ್ಥರಿಗೆ ಸ್ಥಳ ನಿಗದಿಪಡಿಸುವ ಕಾರ್ಯ ಎಪಿಎಂಸಿ ಒಂದೆರಡು ದಿನಗಳಲ್ಲಿ ಮಾಡಲಿದೆ. ಇದೇ ವೇಳೆ ಸೆಂಟ್ರಲ್ ಮಾರುಕಟ್ಟೆಯಲ್ಲಿದ್ದ ರಿಟೇಲ್ ವ್ಯಾಪಾರಸ್ಥರಿಗೆ ನಗರದ ಕೇಂದ್ರ ಮೈದಾನದ ಬಳಿಯ ನಿಗದಿತ ಜಾಗದಲ್ಲಿ ಮೂರು ತಿಂಗಳ ಅವಯಲ್ಲಿ ತಾತ್ಕಾಲಿಕ ಕಟ್ಟಡ ನಿರ್ಮಾಣವಾಗಲಿದೆ ಎಂದರು.
೧೫ ದಿನಗಳಲ್ಲಿ ತಾತ್ಕಾಲಿಕ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಉಳಿದಂತೆ ಸೆಂಟ್ರಲ್ ಮಾರುಕಟ್ಟೆ ಜಾಗದಲ್ಲಿ ಸ್ಮಾರ್ಟ್ ಮಾರುಕಟ್ಟೆ ೩ ವರ್ಷಗಳಲ್ಲಿ ತಲೆ ಎತ್ತಲಿದೆ. ಕೊರೋನಾ ನಿಯಂತ್ರಣಗೊಂಡು ಲಾಕ್‌ಡೌನ್ ತೆರವುಗೊಂಡಾಗ ಸೆಂಟ್ರಲ್ ಮಾರುಕಟ್ಟೆಯಲ್ಲಿದ್ದ ಇತರ ರಿಟೇಲ್ ವ್ಯಾಪಾರಸ್ಥರಿಗೂ ಕೇಂದ್ರ ಮೈದಾನದ ಬಳಿಯ ತಾತ್ಕಾಲಿಕ ಮಾರುಕಟ್ಟೆ ಕಟ್ಟಡದಲ್ಲಿ ವ್ಯವಸ್ಥೆ ಆಗಲಿದೆ ಎಂದು ನಳಿನ್ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss