ಹೊಸ ದಿಗಂತ ಆನ್ ಡೆಸ್ಕ್:
ವಂಚಕ ಯುವರಾಜನ ಖಾತೆಯಿಂದ ಹಣ ವರ್ಗಾವಣೆ ವಿಚಾರವಾಗಿ ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಸತತ ನಾಲ್ಕು ಗಂಟೆ ಕಾಲ ಸಿಸಿಬಿ ವಿಚಾರಣೆ ಎದುರಿಸಿ ಹೊರ ಬಂದಿದ್ದಾರೆ.
ವಿಚಾರಣೆ ಮುಗಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಧಿಕಾ, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೀನಿ. ಮತ್ತೆ ವಿಚಾರಣೆಗೆ ಕರೆದರು ಬರುವೆ . ತನಿಖೆಗೆ ನಾನು ಸಹಕರಿಸುತ್ತೇನೆ. ಎಲ್ಲಾ ದಾಖಲೆಗಳನ್ನ ಸಿಸಿಬಿ ಅಧಿಕಾರಿಗಳಿಗೆ ಒದಗಿಸಿದ್ದೇನೆ ಎಂದು ಹೇಳಿದ್ದಾರೆ.
ಕೋಟ್ಯಂತರ ರೂಪಾಯಿ ವಂಚನೆ ಆರೋಪದಡಿ ಬಂಧಿತನಾಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹೆಸರು ಕೇಳಿಬಂದಿದೆ. ಯುವರಾಜ್ನಿಂದ ರಾಧಿಕಾಗೆ 1.25 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವಂತೆ ಡಾಲರ್ಸ್ ಕಾಲನಿಯಲ್ಲಿರೋ ರಾಧಿಕಾ ಕುಮಾರಸ್ವಾಮಿ ಮನೆಗೆ ಸಿಸಿಬಿ ಅಧಿಕಾರಿಗಳು ಗುರುವಾರ ನೋಟಿಸ್ ಕೊಟ್ಟಿದ್ದರು.