ಹತ್ಯಾಸ್: ಉತ್ತರ ಪ್ರದೇಶದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.
ಈ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಮಾಹಿತಿ ನೀಡಿದ್ದು, ಸಾಮೂಹಿಕ ಅತ್ಯಾಚಾಋ ಪ್ರಕರಣ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲಾಗಿದೆ, ಮುಂದಿನ ಏಳು ದಿನಗಳಲ್ಲಿ ತಂಡದಿಂದ ವರದಿ ಬರಲಿದೆ ಎಂದಿದ್ದಾರೆ. ಶೀಘ್ರ ನ್ಯಾಯ ಒದಗಿಸಲು ಫಾಸ್ಟ್ ಟ್ರಾಕ್ ಕೋರ್ಟ್ನಲ್ಲಿ ವಿಚಾರಣೆ ನಡೆಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸೆ. ೧೪ರಂದು ಯುವತಿ ಮೇಲೆ ನಾಲ್ವರು ಅತ್ಯಾಚಾರವೆಸಗಿ, ಗಂಭೀರವಾಗಿ ಗಾಯಗೊಳಿಸಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಯುವತಿ ಮೃತಪಟ್ಟಿದ್ದಾರೆ.