ಲಖನೌ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವಿಶೇಷ ತನಿಖಾ ದಳಕ್ಕೆ ವಹಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.
ಮೂವರನ್ನು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ದಳ ಪ್ರಕರಣದ ತನಿಖೆ ನಡೆಸಲಿದೆ. ಈ ವಿಶೇಷ ದಳದಲ್ಲಿ ಉತ್ತರ ಪ್ರದೇಶ ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿ ಹಾಗೂ ಇನ್ನಿಬ್ಬರು ಹಿರಿಯ ಅಧಿಕಾರಿಗಳು ಇದ್ದಾರೆ.
ಈ ಅಧಿಕಾರಿಗಳಿಗೆ ತನಿಖೆ ನಡೆಸಿ 7 ದಿನದೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಇನ್ನು , ಹತ್ರಾಸ್ ಪ್ರಕರಣದ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ನನ್ನೊಂದಿಗೆ ಮಾತುಕತೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.