Wednesday, July 6, 2022

Latest Posts

ಹತ್ರಾಸ್ ಅತ್ಯಾಚಾರ ಪ್ರಕರಣ: ನ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಲಕ್ನೋ: ಹತ್ರಾಸ್ ಅತ್ಯಾಚಾರ ಮತ್ತು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕುಟುಂಬ ಸದಸ್ಯರ ಹೇಳಿಕೆಯನ್ನ ದಾಖಲಿಸಿಕೊಂಡ ಹೈಕೋರ್ಟ್ ಮುಂದಿನ ವಿಚಾರಣೆಯನ್ನ ನವೆಂಬರ್ 2ರಂದು ನಡೆಸಲು ಆದೇಶಿಸಿದೆ.
ಡಿಜಿಪಿ, ಎಸಿಎಸ್, ಡಿಎಂ, ಎಸ್ ಪಿ ಸೇರಿದಂತೆ ಹಿರಿಯ ಅಧಿಕಾರಿಗಳ ಹೇಳಿಕೆಯನ್ನ ದಾಖಲಿಸಲಾಗಿದ್ದು, ಮೃತಳ ಶವದ ಜವಾಬ್ದಾರಿಯನ್ನ ಹತ್ರಾಸ್ ಡಿಎಂ ವಹಿಸಿಕೊಂಡಿದ್ದಾರೆ. ಹತ್ರಾಸ್ ಪೊಲೀಸರು ಪ್ರಕರಣದ ತನಿಖೆಯನ್ನು ಇಂದು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಲಿದ್ದು, ಇಂದಿನಿಂದ ಕೇಂದ್ರ ತನಿಖಾ ದಳ ಈ ಪ್ರಕರಣದ ತನಿಖೆಯ ಜವಾಬ್ದಾರಿ ತೆಗೆದುಕೊಳ್ಳಲಿದೆ.
‘ಸಿಬಿಐ ವರದಿಗಳನ್ನು ಗೌಪ್ಯವಾಗಿಡಬೇಕು ಎಂದು ಸಂತ್ರಸ್ತ ಕುಟುಂಬ ಒತ್ತಾಯಿಸಿದ್ದು, ಪ್ರಕರಣದ ತನಿಖೆ ಸಂಪೂರ್ಣವಾಗುವವರೆಗೆ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂಬುದು ‘ ಎಂದು ಹತ್ರಾಸ್ ಸಂತ್ರಸ್ತೆಯ ಕುಟುಂಬದ ವಕೀಲೆ ಸೀಮಾ ಕುಶ್ವಾಹ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss