Thursday, August 11, 2022

Latest Posts

ಹತ್ರಾಸ್ ಅತ್ಯಾಚಾರ ಪ್ರಕರಣ: ‌ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್, ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಉಡುಪಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಪೈಶಾಚಿಕವಾಗಿ ಅತ್ಯಾಚಾರ ಮಾಡಿ, ಸಂತ್ರಸ್ತೆಯ ನಾಲಗೆ ಕತ್ತರಿಸಿ, ಮೃತಪಟ್ಟ ನಂತರ ದೇಹವನ್ನು ಕುಟುಂಬದವರಿಗೆ ನೋಡಲು ಬಿಡದೇ ರಾತ್ರೋ ರಾತ್ರಿ ಪೊಲೀಸ್ ಇಲಾಖೆ ಅಂತ್ಯಕ್ರಿಯೆ ಮಾಡಿರುವ ಘಟನೆಯನ್ನು ಖಂಡಿಸಿ ಬ್ರಹ್ಮಗಿರಿ ಕಾಂಗ್ರೆಸ್ ಭವನ ಎದುರು ಗುರುವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ,  ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಮುಖಂಡರಾದ ಚಂದ್ರಿಕಾ ಶೆಟ್ಟಿ, ರೋಶನಿ ಒಲಿವೆರಾ, ಮೀನಾಕ್ಷಿ ಮಾಧವ ಬನ್ನಂಜೆ, ಐಡಾ ಗಿಬ್ಬ ಡಿಸೋಜ ಮತ್ತಿತರರಿದ್ದರು.
ದಲಿತ ಸಂಘರ್ಷ ಸಮಿತಿಯಿಂದ ಮೆರವಣಿಗೆ
 ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಅಮಾನುಷ ಅತ್ಯಾಚಾರ ಘಟನೆಯನ್ನು ಖಂಡಿಸಿ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹಾಗೂ ವಿವಿಧ ಸಂಘಟನೆಗಳಿಂದ ಗುರುವಾರ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಉತ್ತರ ಪ್ರದೇಶ ಸರಕಾರದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶವದ ಪ್ರತಿಕೃತಿ ಮೆರವಣಿಗೆ ನಡೆಸಲಾಯಿತು.


ಪ್ರತಿಭಟನೆಯಲ್ಲಿ ದಸಂಸ ಸಂಚಾಲಕ ಶ್ಯಾಮ್‌ರಾಜ್ ಬಿರ್ತಿ , ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್  , ಮುಖಂಡರಾದ ಪರಮೇಶ್ವರ ಉಪ್ಪೂರು, ಮಂಜುನಾಥ ಬಾಳ್ಕುದ್ರು, ವಿವಿಧ ಸಂಘಟನೆ ಪ್ರಮುಖರಾದ ಯಾಸಿನ್ ಮಲ್ಪೆ, ಜನಾರ್ದನ್ ಭಂಡಾರ್ಕರ್, ಫಣಿರಾಜ್, ಅಮೃತ್ ಶೆಣೈ, ಸುಂದರಿ ಪುತ್ತೂರು, ವಿಲಿಯಂ ಮಾರ್ಟಿಸ್, ಹರ್ಷಕುಮಾರ್ ಕುಗ್ವೆ ಮೊದಲಾದವರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss