Thursday, June 30, 2022

Latest Posts

ಹತ್ರಾಸ್ ಅತ್ಯಾಚಾರ ಪ್ರಕರಣ| ಸಿಬಿಐ ತನಿಖೆಗೆ ಸುಪ್ರೀಂನಲ್ಲಿ ಅಫಿಡೆವಿಟ್ ಸಲ್ಲಿಸಿದ ಯೋಗಿ ಸರ್ಕಾರ

ಲಖನೌ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದ್ದು, ಈ ಕುರಿತು ಉನ್ನತ ನ್ಯಾಯಾಲಯವು ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಕೋರಿದೆ.

ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ ಸರ್ಕಾರವು ಈ ಪ್ರಕರಣದ ಸಿಬಿಐ ತನಿಖೆಯನ್ನು ಮೇಲ್ವಿಚಾರಣೆ ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ನ್ಯಾಯಯುತ ತನಿಖೆಯ ಹಳಿ ತಪ್ಪಿಸುವ ಉದ್ದೇಶ ಕೆಲವರು ಹೊಂದಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವನ್ನು ಕೆಣಕಲು ಕೆಟ್ಟ ಅಭಿಯಾನ ಮಾಡಲಾಗುತ್ತಿದೆ ಎಂದು ಅಫಿಡವಿಟ್ ನಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೆ ನಡೆಸಿದ ತನಿಖೆಯನ್ನು ವಿವರವಾಗಿ ವಿವರಿಸಲಾಗಿದೆ. ಈ ವಿಷಯವು ಜಾತಿ ಮತ್ತು ಕೋಮು ಬಣ್ಣ ಪಡೆಯುತ್ತಿದೆ ಎಂದು ಆರೋಪಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss