Thursday, August 18, 2022

Latest Posts

ಹತ್ರಾಸ್ ಅತ್ಯಾಚಾರ ಪ್ರಕರಣ: ತ್ವರಿತಗತಿ ನ್ಯಾಯ ಬಯಸುತ್ತೇವೆ ಎಂದ ಕಂಗನಾ

ಮುಂಬೈ: ಕಳೆದ ವರ್ಷ ಹೈದರಾಬಾದ್ ಅತ್ಯಾಚಾರ ಪ್ರಕರಣದಂತೆ ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಘಟನೆಗೆ ತ್ವರಿತಗತಿ ನ್ಯಾಯ ಒದಗಿಸಬೇಕೆಂದು ನಟಿ ಕಂಗನಾ ರನೌತ್ ಬುಧವಾರ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ನನಗೆ ಯೋಗಿ ಆದಿತ್ಯನಾಥ್‌ ಅವರ ಮೇಲೆ ಅಪಾರ ನಂಬಿಕೆ ಇದೆ. ಕಳೆದ ವರ್ಷ ಹೈದರಾಬಾದ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಜೀವಂತವಾಗಿ ಸುಟ್ಟಿಹಾಕಿದ್ದರು. ಆ ಘಟನೆ ನಡೆದ ಸ್ಥಳದಲ್ಲಿಯೇ ಆರೋಪಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಅಂತಹುದೇ ಭಾವನಾತ್ಮಕವಾದ ತ್ವರಿತಗತಿ ನ್ಯಾಯವನ್ನು ಬಯಸುತ್ತೇವೆ’ ಎಂದು ಕಂಗನಾ ರನೌತ್‌ ತಿಳಿಸಿದ್ದಾರೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!