Tuesday, August 16, 2022

Latest Posts

ಹತ್ರಾಸ್ ಅತ್ಯಾಚಾರ ​ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಂತ್ರಸ್ತೆಯ ಕುಟುಂಬಕ್ಕೆ ಸಿಎಂ ಯೋಗಿ ಭರವಸೆ

ಲಖನೌ: ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ​ ಪ್ರಕರಣದ ತನಿಖೆಯನ್ನು ಎಸ್​​ಐಟಿ (ವಿಶೇಷ ತನಿಖಾ ದಳ)ಗೆ ವಹಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಇದೀಗ ಮೃತ ಸಂತ್ರಸ್ತೆಯ ಕುಟುಂಬದೊಂದಿಗೆ ಇಂದು ವಿಡಿಯೋ ಕಾಲ್​ ಮೂಲಕ ಮಾತನಾಡಿ, ಸಾಂತ್ವನ ಹೇಳಿದ್ದಾರೆ.
ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯೋಗಿ ಭರವಸೆ ನೀಡಿದ್ದಾರೆ. ಹಾಗೇ ಮೃತಳ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ಸಹಾಯವನ್ನೂ ಮಾಡಲಾಗುವುದು ಎಂದು ಯೋಗಿ ಆದಿತ್ಯನಾಥ್​ ತಿಳಿಸಿದ್ದಾರೆಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಮೃತಳ ಕುಟುಂಬಕ್ಕೆ 25 ಲಕ್ಷ ರೂ.ಆರ್ಥಿಕ ನೆರವು. ಶಾಲಾ ಶಿಕ್ಷಕರ ಮಟ್ಟದ ಸರ್ಕಾರಿ ಉದ್ಯೋಗ, ಸರ್ಕಾರಿ ಯೋಜನೆಯಡಿ ವಸತಿ ಮತ್ತು ಪ್ರಕರಣದ ವಿಚಾರಣೆಯನ್ನು ಫಾಸ್ಟ್​ ಟ್ರ್ಯಾಕ್​ ಕೋರ್ಟ್​​ನಲ್ಲಿ ನಡೆಸುವ ಭರವಸೆಯನ್ನು ಯೋಗಿ ಆದಿತ್ಯನಾಥ್​ ಸಂತ್ರಸ್ತೆಯ ತಂದೆಗೆ ನೀಡಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss