ಲಖ್ನೌ:ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಅಲ್ಲಾಹಾಬಾದ್ ಹೈ ಕೋರ್ಟ್ ನೊಟೀಸ್ ಜಾರಿಗೊಳಿಸಿದೆ
ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ಥೆಯು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಳು. ಅವಳ ಪಾರ್ಥಿವ ಶರೀರವನ್ನು ಅವಳ ಕುಟುಂಬಸ್ಥರಿಗೆ ನೀಡದೇ ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು. ಈ ಘಟನೆಯಿಂದಾಗಿ ಉತ್ತರ ಪ್ರದೇಶದ ಸರ್ಕಾರ ಮತ್ತು ಪೊಲೀಸರ ವಿರುದ್ಧ ಎಲ್ಲೆಡೆಯೂ ತೀರ್ವ ಆಕ್ರೋಶ ವ್ಯಕ್ತವಾಗುತ್ತಿದೆ.
ದೆಹಲಿಯ ಆಸ್ಪತ್ರೆಯಲ್ಲಿ ಸಾವಿಗೀಡಾದ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಫೋರೆನ್ಸಿಕ್ ವರದಿ ಮೂಲಕ ತಿಳಿದುಬಂದಿದೆ ಎಂದು ಸರ್ಕಾರ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಘಟನೆಯನ್ನು ಪರಿಗಣಿಸಿ ಸ್ವಯಂಪ್ರೇರಿತರಾಗಿ ಅಲಹಾಬಾದ್ ಹೈ ಕೋರ್ಟ್ ನೊಟೀಸ್ ಜಾರಿ ಮಾಡಿದೆ.