Sunday, August 14, 2022

Latest Posts

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಜಂತರ್ ಮಂತರ್‌ನಲ್ಲಿ ಭಾರೀ ಪ್ರತಿಭಟನೆ

ಹೊಸದಿಲ್ಲಿ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಇಡೀ ರಾಷ್ಟ್ರದ ಬಯಕೆಯಂತೆ ಹಂತಕರಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಆಗ್ರಹಿಸುವುದಾಗಿ ಹೇಳಿದರು.
ಅತ್ಯಾಚಾರ ಪ್ರಕರಣದಲ್ಲಿ ರಾಜಕಾರಣ ಮಾಡುವ ಪ್ರಶ್ನೆಯೇ ಸಂಭವಿಸುವುದಿಲ್ಲ. ಈ ಹೋರಾಟ ರಾಜಕೀಯ ಪ್ರೇರಿತವಲ್ಲ ಎಂದ ಕೇಜ್ರಿವಾಲ್, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದರು.
ಹಂತಕರು ಕ್ಷಮಿಸಲಾರದಂತಹ ಹೀನಕೃತ್ಯ ಎಸಗಿದ್ದು, ಅವರಿಗೆ ಕಾನೂನಿನಡಿಯಲ್ಲಿ ಉಗ್ರ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ ಕೇಜ್ರಿವಾಲ್ ಪ್ರತಿಭಟನೆಗೆ ತಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss