ನವದೆಹಲಿ: ಹತ್ರಾಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು 10 ದಿನಗಳ ಸಮಯ ವಿಸ್ತರಣೆ ಮಾಡಲಾಗಿದೆ.
ಹತ್ರಾಸ್ ಪ್ರಕರಣದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡಕ್ಕೆ ಏಳು ದಿನಗಳಲ್ಲಿ ವರದಿ ನೀಡುವಂತೆ ಗಡುವು ನೀಡಿತ್ತು. ಇದೀಗ ಮತ್ತೆ ಹತ್ತು ದಿನ ಸಮಯ ವಿಸ್ತರಣೆ ಮಾಡಲಾಗಿದೆ. ಹತ್ರಾಸ್ನಲ್ಲಿ ನಾಲ್ವರಿಂದ ಯುವತಿ ಮೇಲೆ ಅತ್ಯಾಚಾರ, ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಯುವತಿ ಮೃತಪಟ್ಟಿದ್ದಳು. ಈ ಕುರಿತು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.