spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹದಗೆಟ್ಟಿರುವ ರಸ್ತೆಗಳು-ಬಳಕೆಯಾಗದ ಅನುದಾನ: ಜಿ.ಪಂ. ಸಭೆಯಲ್ಲಿ ಸದಸ್ಯರ ಅಸಮಾಧಾನ

- Advertisement -Nitte

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹದಗೆಟ್ಟಿರುವ ರಸ್ತೆಗಳು ಇನ್ನೂ ಅಭಿವೃದ್ಧಿಯಾಗದಿರುವ ಬಗ್ಗೆ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ಅಭಿವೃದ್ಧಿಗಾಗಿ ಬಿಡುಗಡೆಯಾದ ಅನುದಾನವೂ ಸಮರ್ಪಕವಾಗಿ ಬಳಕೆಯಾಗದಿರುವ ಬಗ್ಗೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ಈಲ್ಲಾ ಪಂಚಾಐತ್ ಅಧ್ಯಕ್ಷ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸದಸ್ಯ ಶಿವು ಮಾದಪ್ಪ ಅವರು, ಜಿಲ್ಲೆಯ ಹಲವು ರಸ್ತೆಗಳು ಹದಗೆಟ್ಟಿದ್ದು, ಇದನ್ನು ಸರಿಪಡಿಸಬೇಕು. ಪೊನ್ನಂಪೇಟೆ ತಾಲೂಕಿನ ಕಾಕೂರು ಹಳೇ ಸೇತುವೆಗೆ ಸುಣ್ಣ ಬಳಿಯಲಾಗಿದ್ದು, ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಸದಸ್ಯ ಅಪ್ಪಚಂಡ ಮಹೇಶ್ ಅವರು, ಕೊಣನೂರು-ಮಾಕುಟ್ಟ ರಸ್ತೆ ಅರ್ಧಕ್ಕೆ ನಿಂತಿದ್ದು, ಇದನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದರು. ಬಿ.ಜೆ.ದೀಪಕ್ ಅವರು ಸೋಮವಾರಪೇಟೆ ತಾಲೂಕಿನಲ್ಲಿ ಹಲವು ರಸ್ತೆಗಳು ಹದಗೆಟ್ಟಿವೆ. ಇದನ್ನು ಸರಿಪಡಿಸಬೇಕು ಎಂದರು. ಸರೋಜಮ್ಮ ಅವರು ಮಾತನಾಡಿ ತೋಳೂರು ಶೆಟ್ಟಳ್ಳಿ ರಸ್ತೆ ನಿರ್ಮಾಣಕ್ಕೆ ಜಲ್ಲಿಕಲ್ಲು ಸುರಿಯಲಾಗಿತ್ತು. ಆದರೆ ಕಾಮಗಾರಿ ಆರಂಭಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಲೋಕೋಪಯೋಗಿ ಇಲಾಖೆಗೆ ರಸ್ತೆ, ಸೇತುವೆ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗಾಗಿ ಸರ್ಕಾರ ಮಾರ್ಚ್ ತಿಂಗಳಲ್ಲಿ 14 ಕೋಟಿ ರೂ. ಬಿಡುಗಡೆ ಮಾಡಿತ್ತು. ಆದರೆ ಈ ಅನುದಾನ ವ್ಯಪಗತವಾಗಿದೆ ಎಂದು ಜಿ.ಪಂ.ಸದಸ್ಯ ಮುರಳಿ ಕರುಂಬಮ್ಮಯ್ಯ ಮತ್ತಿತರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಈ ಬಗ್ಗೆ ಮಾತನಾಡಿದ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಮದನ್ ಮೋಹನ್ ಅವರು, ಮಾರ್ಚ್ ಕೊನೆ ವಾರದಲ್ಲಿ ಬಿಲ್ಲನ್ನು ಖಜಾನೆಗೆ ಸಲ್ಲಿಸಲಾಗಿತ್ತು. ಆದರೆ ಜಿಲ್ಲಾ ಖಜಾನಾಧಿಕಾರಿಯವರು ಬಿಲ್ಲನ್ನು ತಡೆಹಿಡಿದ ಪರಿಣಾಮ ಹಣ ವ್ಯಪಗತವಾಗುವಂತಾಯಿತು ಎಂದು ದೂರಿದರು.
ಈ ಬಗ್ಗೆ ಜಿಲ್ಲಾ ಖಜಾನಾಧಿಕಾರಿಯವರು ಮಾಹಿತಿ ನೀಡಿ ಆರ್ಥಿಕ ಇಲಾಖೆಯ ನಿರ್ದೇಶನದಂತೆ ಕ್ರಮವಹಿಸಲಾಗಿದೆ. ಇದರಲ್ಲಿ ನನ್ನ ಪಾತ್ರವಿಲ್ಲ ಎಂದರು.
ಸರ್ಕಾರದ ನಿರ್ದೇಶನ ಜೊತೆಗೆ, ಅಧಿಕಾರಿಗಳು ಮಾನವೀಯ ನೆಲೆಯಲಿ ಕಾರ್ಯನಿರ್ವಹಿಸಬೇಕು. ಹಣ ವ್ಯಪಗತವಾಗಿರುವುದರಿಂದ ಜಿಲ್ಲೆಗೆ ನಷ್ಟವಲ್ಲವೇ ಎಂದು ಮುರಳಿ ಕರುಂಬಮಯ್ಯ ಅವರು ಖಾರವಾಗಿ ನುಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss