Wednesday, June 29, 2022

Latest Posts

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಿ ವೈದ್ಯರಿಂದ ಒತ್ತಾಯ: ಸೆ.15ರಿಂದ ಸರ್ಕಾರಿ ವೈದ್ಯರ ಮುಷ್ಕರ

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಿ ವೈದ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಸೆ.೧೫ ನಂತರ ಹಂತ ಹಂತವಾಗಿ ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಈಗಾಗಲೇ ಈ ಬಗ್ಗೆ ಮುಖ್ಯ ಮಂತ್ರಿ ಬಿಎಸ್‌ವೈ ಮತ್ತು ಆರೋಗ್ಯ ಶಿಕ್ಷಣ ಸಚಿವ ಶ್ರೀರಾಮುಲು ಅವರಲ್ಲಿ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದಾಗಿ ವೈದ್ಯ ಮೂಲಗಳು ತಿಳಿಸಿವೆ.

ವೈದ್ಯರು ಈ ಕೊರೋನಾ ಬಿಕ್ಕಟ್ಟಿನ ಸಮಯದಲ್ಲಿ ಮುಷ್ಕರ ಆರಂಭಿಸಿದರೆ ಜನಸಾಮಾನ್ಯರಿಗೆ ತೊಂದರೆ ಆಗಲಿದೆ. ತಮ್ಮ ಬೇಡಿಕೆ ಈಡೇರದಿದ್ದರೆ ವೈದ್ಯರು ಸೆ.೧೫ ರಿಂದ ಹಂತ ಹಂತವಾಗಿ ವೈದ್ಯಕೀಯ ಸೇವೆ ಸ್ಥಗಿತ ಗೊಳಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss