ಮುಂಬೈ: ಬಾಲಿವುಡ್ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿ ಹುಟ್ಟಿಕೊಂಡಿರುವ ಊಹಾಪೋಹಕ್ಕೆ ಮರಣೋತ್ತರ ಪರೀಕ್ಷಾ ವರದಿ ತೆರೆ ಎಳೆದಿದೆ.
ನೇಣು ಬಿಗಿದುಕೊಂಡ ಕಾರಣಕ್ಕೇ ಸುಶಾಂತ್ ಮರಣ ಹೊಂದಿದ್ದಾರೆ. ಅವರ ದೇಹದ ಮೇಲೆ ಯಾವುದೇ ಗಾಯದ ಕಲೆಗಳು ಇರಲಿಲ್ಲ. ಹೀಗಾಗಿ ಇದು ಆತ್ಮಹತ್ಯೆ ಎಂದು ಪೋಸ್ಟ್ ಮಾರ್ಟಮ್ ರಿಪೋರ್ಟ್ ಸ್ಪಷ್ಟವಾಗಿ ಹೇಳಿದೆ.
34 ವರ್ಷದ ಬಾಲಿವುಡ್ ನಟ ಸುಶಾಂತ್ ನ ಶವ ಮುಂಬೈನ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬೆಳಗ್ಗೆ ಅವರ ಮನೆ ಕೆಲಸದವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು. ಸುಶಾಂತ್ ಸಿಂಗ್ ಕಳೆದ 6 ತಿಂಗಳಿನಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿತ್ತು. ಇದು ಆತ್ಮಹತ್ಯೆ ಅಲ್ಲ, ಅನುಮಾನವಿದೆ, ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಒತ್ತಾಯಗಳೂ ಕೇಳಿಬಂದಿತ್ತು. ಈಗ ಇವೆಲ್ಲವಕ್ಕೂ ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಿದೆ. ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.