ಬೆಂಗಳೂರು: ಹಳ್ಳಿಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯಲು ನಿರ್ಧರಿಸಿದ್ದು,ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಮದ್ಯವನ್ನು ಮನೆಮನೆಗೆ ತಲುಪಿಸಲು, ಚರ್ಚೆ ನಡೆಯುತ್ತಿದೆ. ಇದನ್ನು ಗಂಭೀರವಾಗಿ ವಿರೋಧಿಸುತ್ತೇನೆ. ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ ಮನೆ ಬಾಗಿಲಿಗೆ ಮದ್ಯ ಪೂರೈಸುವ,ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಚಿಂತನೆ ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.