ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸಚಿವರಾಗುವ ಹಂಬಲದಲ್ಲಿದ್ದ ಎ.ಹೆಚ್. ವಿಶ್ವನಾಥ್ಗೆ ಹೈಕೋರ್ಟ್ ಶಾಕ್ ನೀಡಿದ್ದು, 2021ರವರೆಗೆ ಹೆಚ್ ವಿಶ್ವನಾಥ್ ಸಚಿವರಾಗುವಂತಿಲ್ಲ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಿದೆ.
ಸಂವಿಧಾನದ ಆರ್ಟಿಕಲ್ 164 (1B), 361 B ಅಡಿ ವಿಶ್ವನಾಥ್ ಅವರು ಅನರ್ಹ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶದಲ್ಲಿ ತಿಳಿಸಿದೆ. ಅಲ್ಲದೇ ಆರ್ ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡದಂತೆ ಕೋರಿ ವಕೀಲ ಎ.ಎಸ್. ಹರೀಶ್ ಪಿಐಎಲ್ ಸಲ್ಲಿಸಿದ್ದರು. ಅರ್ಜಿದಾರರ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದಿಸಿದ್ದರು.ಹೆಚ್ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಏಕೆಂದರೆ ಅನರ್ಹರಾಗಿ, ಸೋತು ನಾಮನಿರ್ದೇಶನಗೊಂಡಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು ಎಂದು ಮಹತ್ವದ ಆದೇಶ ನೀಡಿದೆ.